ಅರಿವಾಯ್ತು ಜೈಲು ವಾಸದ ನರಕಯಾತನೆ.. ತೀವ್ರ ಬೆನ್ನು ನೋವಿಂದ ‘ದಾಸ’ ವಿಲವಿಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್​ಗೆ ಜೈಲು ನರಕವಾಗಿ ಪರಿಣಮಿಸಿದೆ. ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಮೂಲಗಳ ಪ್ರಕಾರ, ದರ್ಶನ್​ಗೆ ಕೂರುವುದು-ಏಳುವುದು ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ.

ನಿನ್ನೆ ವಕೀಲ ರಾಮ್​ ಸಿಂಗ್, ದರ್ಶನ್ ಭೇಟಿಗಾಗಿ ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಸಂದರ್ಶಕರ ಕೊಠಡಿಗೆ ಬರುವಾಗ ಬೆನ್ನನ್ನು ಪದೇ ಪದೇ ಮುಟ್ಟಿಕೊಳ್ಳುತ್ತಾ ನೋವಿನಲ್ಲಿಯೇ ಸಂದರ್ಶಕರ ಕೊಠಡಿಗೆ ದರ್ಶನ್ ಬಂದರು.

ದರ್ಶನ್​ಗೆ ಜೈಲಿನಲ್ಲಿ ಫಿಜಿಯೋಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗಿದ್ದರೂ ಸಹ ಬೆನ್ನು ನೋವು ಕಡಿಮೆ ಆಗಿಲ್ಲ. ದರ್ಶನ್​ರ ಬೆನ್ನಿನ ಎಲ್​1 ಹಾಗೂ ಎಲ್​5 ಭಾಗದಲ್ಲಿ ತೀವ್ರವಾಗಿ ನೋವಿದ್ದು, ಶಸ್ತ್ರಚಿಕಿತ್ಸೆಯ ಅಗತ್ಯ ಇದೆಯೆಂದು ವೈದ್ಯರು ಸಲಹೆ ನೀಡಿದ್ದಾರೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!