ಉಮಾಪತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಸರ್ಜಾ ,ನಟ ಉಮಾಪತಿ ರಾಮಯ್ಯ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಚೆನ್ನೈನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾದರು.

ಐಶ್ವರ್ಯ, ಉಮಾಪತಿ ಅವರು ಪ್ರೀತಿಸಿ ಮದುವೆಯಾಗಿದ್ದಾರೆ. ಉಮಾಪತಿ ಅವರು, ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಮಗನಾಗಿದ್ದು ಇವರು ಕೂಡ ತಮಿಳು ನಟ.

ಐಶ್ವರ್ಯಾ ಸರ್ಜಾ ಕೆಂಪು ಬಣ್ಣದ ಸೀರೆಯಲ್ಲಿ ಕಂಗೊಳಿಸಿದ್ರೆ, ಲೈಟ್ ಬಣ್ಣದ ಶರ್ಟ್ ಮತ್ತು ಪಂಚೆ ಧರಿಸಿ ವರ ಉಮಾಪತಿ ಮಿಂಚಿದ್ದಾರೆ.

10-06-2024 ಎಂದಷ್ಟೇ ನಟಿ ಸೋಷಿಯಲ್ ಮೀಡಿಯಾದಲ್ಲಿ ಅಡಿಬರಹ ನೀಡಿದ್ದಾರೆ. ಅಂದರೆ ನಿನ್ನೆ ಇವರ ಮದುವೆ ನಡೆದಿದೆ. ಇದು ಸರ್​ಪ್ರೈಸ್​ ಮದುವೆಯಾಗಿದ್ದು, ಹೆಚ್ಚಿನವರಿಗೆ ಇದರ ವಿಷಯವೇ ತಿಳಿದಿರಲಿಲ್ಲ ಎನ್ನುವುದು ಕುತೂಹಲ.

ಐಶ್ವರ್ಯಾ ಮತ್ತು ತಮಿಳು ನಟ ಉಮಾಪತಿ ರಾಮಯ್ಯ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯ ಮೇರೆಗೆ ಇತ್ತೀಚೆಗೆ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!