Tuesday, July 5, 2022

Latest Posts

ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಭವಿಷ್ಯ- ಕೇಂದ್ರ ಶಿಕ್ಷಣ ಸಚಿವರು ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯಕೀಯ ಪದವಿ ಪೂರ್ಣಗೊಳಿಸಲು ಎಲ್ಲಾ ರೀತಿಯ ಅನುಕೂಲ ಕಲ್ಪಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ.
ಇತ್ತೀಚೆಗೆ ಯುದ್ಧಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ಭಾರತೀಯ ವಿದ್ಯಾರ್ಥಿಗಳ ಭವಿಷ್ಯದ ಕುರಿತಾಗಿ ಸಂಸತ್‌ ಅಧಿವೇಶನದಲ್ಲಿ ಕೇಳಿಬಂದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಆಪರೇಷನ್ ಗಂಗಾದಡಿ ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ಕರೆತಂದಿದ್ದೇವೆ.
ಭಾರತಕ್ಕೆ ಮರಳಿರುವ ವೈದ್ಯ ವಿದ್ಯಾರ್ಥಿಗಳ ಕುರಿತು ಸರ್ಕಾರಕ್ಕೆ ಕಾಳಜಿಯಿದೆ. ಯುದ್ಧದ ಆಘಾತದಿಂದ ಅವರನ್ನು ಹೊರತರಲು ನಾವು ಪ್ರಯತ್ನಿಸುತ್ತಿದ್ದೇವೆ. ಅವರ ಭವಿಷ್ಯದ ಕುರಿತಾಗಿ ಕೇಂದ್ರ ಸರ್ಕಾರ ಜವಾಬ್ದಾರಿಯುತ ನಿರ್ಣಯಗಳನ್ನು ಕೈಗೊಳ್ಳಲಿದೆ. ಉಕ್ರೇನ್‌ ನಲ್ಲಿ ಮರಳಿದ ವಿದ್ಯಾರ್ಥಿಗಳು ಭಾರತದಲ್ಲಿ ವೈದ್ಯರಾಗಲಿದ್ದಾರೆ. ವಿದ್ಯಾರ್ಥಿಗಳಿಗೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss