ಮ್ಯಾನ್ಮಾರ್‌ ಗಡಿಯಲ್ಲಿ ಸಕ್ರಿಯವಾಗಿದೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಜಾಲ: ಎನ್‌ಐಎ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಮ್ಯಾನ್ಮಾರ್‌ಗೆ ಹೊಂದಿಕೊಂಡಿರುವ ಗಡಿಯಲ್ಲಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಮಾಡುವ ಜಾಲ ಸಕ್ರಿಯವಾಗಿದ್ದು, ಈ ಜಾಲ ಮಣಿಪುರ ಮತ್ತು ಮಿಜೋರಾಂಗೆ ಶಸ್ತ್ರಾಸ್ತ್ರಗಳನ್ನು ಸಾಗಿಸಿ, ಸಂಗ್ರಹಿಸುತ್ತಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

ಮಿಜೋರಾಂ ರಾಜಧಾನಿ ಐಜ್ವಾಲ್‌ನಲ್ಲಿರುವ ಬಂದೂಕು ಮಾರಾಟ ಮಳಿಗೆ ಸೇರಿದಂತೆ 6 ಸ್ಥಳಗಳಲ್ಲಿ ಶನಿವಾರ ಶೋಧ ನಡೆಸಿದ್ದ ಎನ್‌ಐಎ, ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ಪಾತ್ರ ಹೊಂದಿದ್ದಾನೆ ಎನ್ನಲಾದ ಸೋಲೊಮನ್‌ ಅಲಿಯಾಸ್‌ ಹಮಿಂಗಾ ಎಂಬಾತನನ್ನು ಬಂಧಿಸಿತ್ತು. ಈ ಕಾರ್ಯಾಚರಣೆ ಬೆನ್ನಲ್ಲೇ, ಎನ್‌ಐಎ ಈ ಕುರಿತು ಹೇಳಿಕೆ ನೀಡಿದೆ.

ಅಪಾರ ಪ್ರಮಾಣದ ಸ್ಫೋಟಕ ವಸ್ತು, ಡಿಜಿಟಲ್‌ ಸಾಧನಗಳು, ದಾಖಲೆಗಳು ಹಾಗೂ ಅಪರಾಧಕೃತ್ಯಗಳಿಗೆ ಬಳಸುವ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಎನ್‌ಐಎ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಈ ಹಿಂದೆ, ಮಿಜೋರಾಂನ ಲೈಗೈಹವ್ಮಾ ಎಂಬ ವ್ಯಕ್ತಿಯನ್ನು ಎನ್‌ಐಎ ಬಂಧಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!