ಮಣಿಪುರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಶಸ್ತ್ರಾಸ್ತ್ರಗಳು ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದ ಹಿಂಸಾಚಾರ ಭುಗಿಲೆದ್ದಿದ್ದು, ಸಾಕಷ್ಟು ಸಾವು ನೋವು ಸಂಭವಿಸಿದೆ. ಹಿಂಸಾಚಾರ ಮುಂದುವರಿಸಲು ನಡೆಸಿದ್ದ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದಾರೆ.

ಹಿಂಸಾಚಾರದಲ್ಲಿ ಸಾಕಷ್ಟು ಶಸ್ತ್ರಾಸ್ತ್ರಗಳನ್ನು ಕೂಡ ಬಳಕೆ ಮಾಡಲಾಗಿತ್ತು. ಮತ್ತೆ ಹಿಂಸಾಚಾರಕ್ಕೆ ಬಳಕೆ ಮಾಡಬಹುದಾಗಿದ್ದ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಹಿಮಾ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ ಶಸ್ತ್ರಾಸ್ತ್ರ, ಮದ್ದುಗುಂಡು, ಪಿಸ್ತೂಲು, ಮ್ಯಾಗಜಿನ್ ಹಾಗೂ ಸ್ಫೋಟಕಗಳನ್ನು ವಶಪಡಿಸಿಕೊಂಡು ದೊಡ್ಡ ಹಿಂಸಾಚಾರವನ್ನು ತಡೆದಿದ್ದಾರೆ. ಗುಪ್ತಚರ ಮಾಹಿತಿ ಅನ್ವಯ ಬೆಳಗಿನ ಜಾವ ಕೊಹಿಮಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆ ಆರಂಭಿಸಿ ವಾಹನದ ಮೇಲೆ ನಾಲ್ಕು ಗಂಟೆಗಳು ನಿಗಾ ಇಟ್ಟಿದ್ದು, ತದನಂತರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!