Saturday, April 1, 2023

Latest Posts

ಭಾರತ-ಪಾಕ್‌ ಗಡಿ ಸಮೀಪ ಸೇನಾಪಡೆ ಹೆಲಿಕಾಪ್ಟರ್‌ ಪತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್
ಭಾರತ-ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಸಮೀಪ ಶುಕ್ರವಾರ ಭಾರತದ ಸೇನಾ ಹೆಲಿಕಾಪ್ಟರ್ ಪತನವಾಗಿದೆ.
ಉತ್ತರ ಕಾಶ್ಮೀರದ ಗುರೆಜ್ ಸೆಕ್ಟರ್‌ ಸಮೀಪದ ಗಡಿ ನಿಯಂತ್ರಣ ರೇಖೆ ಬಳಿ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆತರಲು ಸಾಗುತ್ತಿದ್ದ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ. ಯಾವುದೇ ಸಾವು-ನೋವುಗಳು ಸಂಭವಿಸಿರುವ ಕುರಿತು ಈವರೆಗೆ ವರದಿಯಾಗಿಲ್ಲ. ಹಿಮಾವೃತ ಪ್ರದೇಶದಲ್ಲಿ ಸಿಲುಕಿರುವ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಗೆ ಭದ್ರತಾ ಪಡೆಗಳು ಹೆಲಿಕಾಪ್ಟರ್‌ ದುರಂತಕ್ಕೀಡಾದ ಸ್ಥಳಕ್ಕೆ ಧಾವಿಸಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!