ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಬಿಟ್ಟ ಶ್ವಾನ ಆಕ್ಸೆಲ್‌ಗೆ ಶೌರ್ಯ ಪ್ರಶಸ್ತಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಯೋತ್ಪಾದಕರು ಮತ್ತು ಸ್ಫೋಟಕಗಳನ್ನು ಪತ್ತೆಹಚ್ಚುವಲ್ಲಿ ಶ್ವಾನಗಳು ಸಹ ಪ್ರಮುಖ ಪಾತ್ರ ವಹಿಸುತ್ತವೆ. ಕೆಲವೊಮ್ಮೆ ಭಯೋತ್ಪಾದಕರ ದಾಳಿಯಲ್ಲಿ ಅದೆಷ್ಟೋ ಶ್ವಾನಗಳು ಬಲಿಯಾಗಿವೆ. ಕರ್ತವ್ಯದ ವೇಳೆ ಪ್ರಾಣ ಕಳೆದುಕೊಂಡ ನಾಯಿಗಳನ್ನು ಗುರುತಿಸಿ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿಗಳನ್ನು ಸಹ ನೀಡುತ್ತದೆ.

ಇತ್ತೀಚೆಗಷ್ಟೇ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ‘ಆಕ್ಸೆಲ್’ ಹೆಸರಿನ ನಾಯಿಗೆ ಕೇಂದ್ರ ಸರ್ಕಾರ ಶೌರ್ಯ ಪ್ರಶಸ್ತಿ ಘೋಷಿಸಿದೆ. ಎರಡು ವರ್ಷದ ಆಕ್ಸೆಲ್‌ಗೆ ಸೇನೆಯಿಂದ ಹಲವು ವಿಧಗಳಲ್ಲಿ ತರಬೇತಿ ನೀಡಲಾಗಿತ್ತು. ಈ ಶ್ವಾನ ಸ್ಫೋಟಕಗಳನ್ನು ಹಾಗೂ ಭಯೋತ್ಪಾದಕರ ಚಲನವಲನಗಳನ್ನು ಪತ್ತೆ ಹಚ್ಚಿ ದಾಳಿ ನಡೆಸುತ್ತವೆ. ಸೇನೆಯು ನಡೆಸುವ ಕಾರ್ಯಾಚರಣೆಗಳಲ್ಲಿ ಶ್ವಾನಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಕಳೆದ ತಿಂಗಳ 30 ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿತ್ತು. ಉಗ್ರರನ್ನು ಹಿಡಿಯಲು ಸೇನೆ ಯತ್ನಿಸಿತು. ಈ ಸಂದರ್ಭದಲ್ಲಿ ಯೋಧರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಭಯೋತ್ಪಾದಕರ ವಿರುದ್ಧ ಹೋರಾಡಲು ಆಕ್ಸೆಲ್ ಕೂಡ ಸೇನೆಗೆ ನೆರವಾಗಿತ್ತು. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಆಕ್ಸೆಲ್ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಆಕ್ಸೆಲ್‌ಗೆ ಸೈನ್ಯದಿಂದ ಗೌರವಯುತ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕೇಂದ್ರ ಇತ್ತೀಚೆಗೆ ಪ್ರಕಟಿಸಿದ ಶೌರ್ಯ ಪ್ರಶಸ್ತಿ ಪಟ್ಟಿಯಲ್ಲಿ ಆಕ್ಸೆಲ್ ಗೆ ಸ್ಥಾನ ಸಿಕ್ಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!