ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿದ್ದು, 85 ಅಮಾಯಕರು ಪ್ರಾಣಬಿಟ್ಟಿದ್ದಾರೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪು ನಾಗರಿಕರಿರುವ ಪ್ರದೇಶದಲ್ಲಿ ದಾಳಿಯಾಗಿದೆ.
ತಮ್ಮ ಎಂದಿನ ಕೆಲಸಗಳಲ್ಲಿ ನಿರತರಾಗಿದ್ದ ಜನರ ಮೇಲೆ ಏಕಾಏಕಿ ದಾಳಿಯಾಗಿದ್ದು, ಮಕ್ಕಳು, ವೃದ್ಧರು ಹಾಗೂ ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ದಾಳಿ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ ಜೊತೆಗೆ ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ.