ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಗುಂಡಿಕ್ಕಿ ಕೊಂದಿದೆ.
ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಸೋಮವಾರ ಮುಂಜಾನೆ ಪೂಂಚ್ ಜಿಲ್ಲೆಯ ದೆಗ್ವಾರ್ ಸೆಕ್ಟರ್‌ನಲ್ಲಿ ಕೆಲವು ಭಯೋತ್ಪಾದಕರ ಚಲನವಲನವನ್ನು ಗಮನಿಸಿದ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ.
ಸ್ವಾತಂತ್ರ್ಯ ದಿನಾಚರಣೆಗೂ ಮೊದಲು ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕಳೆದ ಕೆಲವು ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಇದು ಎರಡನೇ ಒಳನುಸುಳುವಿಕೆ ಯತ್ನವಾಗಿದೆ.