Wednesday, June 29, 2022

Latest Posts

ಸೇನಾ ಹೆಲಿಕಾಪ್ಟರ್​​​ ಪತನ: ಘಟನೆ ಕುರಿತು ಪ್ರತ್ಯಕ್ಷದರ್ಶಿ ಮಾಹಿತಿ…

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ನೀಲಗಿರಿಯ ಕನೂರ್​ ಬಳಿ ಸೇನಾಪಡೆಗಳ ಮುಖ್ಯಸ್ಥ ಬಿಪಿನ್​​ ರಾವತ್​​ ಅವರು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​​ ಪತನಗೊಂಡಿದ್ದು, ಈ ಕುರಿತು ಪ್ರತ್ಯಕ್ಷದರ್ಶಿಗಳು ಘಟನೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರತ್ಯಕ್ಷದರ್ಶಿ ನೀಡಿರುವ ಮಾಹಿತಿ ಪ್ರಕಾರ, ಹೆಲಿಕಾಪ್ಟರ್​ ಮರಗಳಿಗೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೆಂಕಿ ಹೊತ್ತಿಕೊಂಡಿದ್ದರಿಂದ ನೆಲಕ್ಕೆ ಅಪ್ಪಳಿಸಿದೆ ಎಂದಿದ್ದಾರೆ. ಹೆಲಿಕಾಪ್ಟರ್​ ಪತನಗೊಳ್ಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿ, ವಿಮಾನದಲ್ಲಿದ್ದವರನ್ನ ರಕ್ಷಣೆ ಮಾಡಲು ಮುಂದಾಗಿದ್ದಾಗಿ ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ಮಾತನಾಡಿ, ಮೊದಲು ಭಾರಿ ಸದ್ದು ಕೇಳಿಸಿತು. ಏನಾಯ್ತು ಎಂದು ಹೊರಗಡೆ ಬಂದು ನೋಡಿದಾಗ ಹೆಲಿಕಾಪ್ಟರ್​​ ಮರಕ್ಕೆ ಡಿಕ್ಕಿ ಹೊಡೆಯಿತು. ಈ ವೇಳೆ ದೊಡ್ಡ ಗಾತ್ರದಲ್ಲಿ ಬೆಂಕಿ ಕಾಣಿಸಿಕೊಂಡು ಹೆಲಿಕಾಪ್ಟರ್​​​ ಕೆಳಕ್ಕೆ ಅಪ್ಪಳಿಸಿತು. ಹೆಲಿಕಾಪ್ಟರ್​​ನಿಂದ ಕೆಲವರು ಹೊರಬರುತ್ತಿದ್ದು, ಅವರಿಗೆ ಬೆಂಕಿ ಹೊತ್ತಿಕೊಂಡಿತ್ತು ಎಂದಿದ್ದಾರೆ. ಘಟನೆ ಬಗ್ಗೆ ತಕ್ಷಣವೇ ಇತರರಿಗೆ ಮಾಹಿತಿ ನೀಡಿ, ಸ್ಥಳಕ್ಕೆ ಸಹಾಯ ಮಾಡಲು ತೆರಳಿದ್ದಾಗಿ ಕೃಷ್ಣಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.
ಹೆಲಿಕಾಫ್ಟರ್​​ನಲ್ಲಿದ್ದ 14 ಜನರಲ್ಲಿ 13 ಜನ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಆದರೆ ಡಿಎನ್​ಎ ಮೂಲಕ ಮೃತದೇಹಗಳನ್ನು ಪತ್ತೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ. ಆದರೆ, ಇದರ ಬಗ್ಗೆ ಯಾವುದೇ ರೀತಿಯ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss