ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ಪತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಮೃತಪಟ್ಟಿರುವುದನ್ನು ಭಾರತೀಯ ಸೇನೆ ದೃಢಪಡಿಸಿದೆ.
ಇಬ್ಬರ ಮೃತದೇಹಗಳನ್ನು ಸೇನಾ ಸಿಬ್ಬಂದಿ ಹೊರಗೆ ತೆಗೆದಿದ್ದು, ಮತ್ತೊಬ್ಬರ ಮೃತ ದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಅರುಣಾಚಲ ಪ್ರದೇಶದ ಅಪ್ಪರ್ ಸಿಯಾಂಗ್ ಜಿಲ್ಲೆಯ ಟ್ಯೂಟಿಂಗ್ ಪ್ರಧಾನ ಕಚೇರಿಯಿಂದ 25 ಕಿಮೀ ದೂರದಲ್ಲಿರುವ ಮಿಗ್ಗಿಂಗ್ ಗ್ರಾಮದ ಬಳಿ ಸುಧಾರಿತ ಸೇನಾ ಲಘು ಹೆಲಿಕಾಪ್ಟರ್(ALH) ಹೆಲಿಕಾಪ್ಟರ್ ಅಪಘಾತಕ್ಕೀಡಾಗಿತ್ತು.