ಜಮ್ಮುವಿನಲ್ಲಿ ಉಗ್ರನನ್ನು ಹೊಡೆದುರುಳಿಸಿದ ಸೇನೆ: ಮುಂದುವರಿದ ಕಾರ್ಯಾಚರಣೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ ನಡೆದ ಸೇನಾ ಕಾರ್ಯಾಚರಣೆ ವೇಳೆ ಕ್ಯಾಪ್ಟನ್‌ವೊಬ್ಬರು ಹುತಾತ್ಮರಾಗಿದ್ದಾರೆ. ಇದರ ಬೆನ್ನಲ್ಲೇ ಗುಂಡಿನ ಚಕಮಯಲ್ಲಿ ಒಬ್ಬ ಉಗ್ರನನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದ್ದು, ಮೂವರು ಉಗ್ರರು ಎಸ್ಕೇಪ್‌ ಆಗಿದ್ದಾರೆ.

ಘಟನೆಯಲ್ಲಿ ಓರ್ವ ನಾಗರಿಕನೂ ಗಾಯಗೊಂಡಿದ್ದಾನೆ. ಇನ್ನು ಉಗ್ರರ ಪತ್ತೆಗೆ ಸೇನೆ ಭರ್ಜರಿ ಕಾರ್ಯಾಚರಣೆ ಕೈಗೆತ್ತಿಕೊಂಡಿದೆ.
ನಾಲ್ವರು ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ ಭಾರತೀಯ ಸೇನೆಯ ಯೋಧರು ದಾಳಿ ನಡೆಸಿದರು. ಉಗ್ರರ ಜತೆಗಿನ ಕಾಳಗದಲ್ಲಿ ಹುತಾತ್ಮರಾದವರು ಭಾರತೀಯ ಸೇನೆಯ ಕ್ಯಾಪ್ಟನ್ ದೀಪಕ್‌ ಸಿಂಗ್‌ ಎಂದು ತಿಳಿದು ಬಂದಿದೆ. .

ಎನ್‌ಕೌಂಟರ್‌ ನಡೆದ ಸ್ಥಳದಿಂದ ಅಮೆರಿಕ ನಿರ್ಮಿತ ಎಂ 4 ಅಸಾಲ್ಟ್ ರೈಫಲ್, ವಿವಿಧ ಉಪಕರಣಗಳು ಹಾಗೂ ಲಾಜಿಸ್ಟಿಕ್ಸ್ ಹೊಂದಿರುವ ಮೂರು ರಕ್ತಸಿಕ್ತ ಚೀಲಗಳನ್ನು ವಶಪಡಿಸಿಕೊಳ್ಳುವಲ್ಲಿ ಸೇನೆ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಮತ್ತು ಕಾಶ್ಮೀಶರದಲ್ಲಿ ಇತ್ತೀಚೆಗೆ ಉಗ್ರರ ಚಟುವಟಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನವಾದ ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪ್ರಮುಖ ನಾಯಕರು ಭಾಗವಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!