ಪಾಕ್ ಮೂಲದ JEM ಉಗ್ರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಹೊಡೆದುರುಳಿಸಿದ ಸೇನೆ

ಹೊಸ ದಿಗಂತ ಡಿಜಿಟಿಲ್ ಡೆಸ್ಕ್:

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (JEM) ಭಯೋತ್ಪಾದಕರ ಸಂಘಟನೆಯ ಟಾಪ್ ಕಮಾಂಡರ್ ನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಉಧಮ್‌ಪುರ ಜಿಲ್ಲೆಯ ದುಡು-ಬಸಂತಗಢ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೆಇಎಂ ಸಂಘಟನೆಯ ಕಮಾಂಡರ್ ನನ್ನು ಹತ್ಯೆ ಮಾಡಲಾಗಿದೆ. ಆತ ಕಳೆದ ನಾಲ್ಕು ವರ್ಷಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಬುಧವಾರ ತಿಳಿಸಿದ್ದಾರೆ.

ಭಯೋತ್ಪಾದಕರನ್ನು ಸದೆಬಡಿಯಲು ಭದ್ರತಾ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದ್ದು, ಜನರ ಬೆಂಬಲವಿಲ್ಲದೆ ಪೊಲೀಸರು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಇತ್ತೀಚೆಗೆ, ದುಡು-ಬಸಂತಗಢ ಅರಣ್ಯದಲ್ಲಿ ದೊಡ್ಡ ಯಶಸ್ಸನ್ನು ಪಡೆದಿದ್ದೇವೆ. ಅಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಕ್ರಿಯರಾಗಿದ್ದ ಜೈಶ್- ಎ-ಮೊಹಮ್ಮದ್ ಸಂಘಟನೆಯ ಟಾಪ್ ಕಮಾಂಡರ್ ನನ್ನು ಹತ್ಯೆ ಮಾಡಲಾಗಿದೆ .ಕಾರ್ಯಾಚರಣೆಗಳು ಮುಂದುವರೆದಿದ್ದು, ಎಲ್ಲಾ ಭಯೋತ್ಪಾದಕರನ್ನು ಒಬ್ಬೊಬ್ಬರಾಗಿ ನಿರ್ಮೂಲನೆ ಮಾಡಲಾಗುವುದು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!