ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಟಿಇಟಿ: ಕಾಲು ಕಳೆದುಕೊಂಡು ಗಂಭೀರ ಸ್ಥಿತಿಯಲ್ಲಿ ಸೈನಿಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಚಲಿಸುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್‌ ರೈಲಿನಿಂದ ಟಿಕೆಟ್ ಪರೀಕ್ಷಕ (ಟಿಟಿಇ) ತಳ್ಳಿದ ಪರಿಣಾಮ ಸೈನಿಕರೊಬ್ಬರು ತಮ್ಮ ಕಾಲನ್ನು ಕಳೆದುಕೊಂಡು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋನು ಅವರನ್ನು ಬೆಳಿಗ್ಗೆ ದಿಬ್ರುಗಢ-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ನಿಂದ ಬರೇಲಿ ಜಂಕ್ಷನ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ತಳ್ಳಲಾಯಿತು ಎಂದು ಅವರು ಹೇಳಿದ್ದಾರೆ.ರೈಲ್ವೇ ಅಧಿಕಾರಿಗಳ ಪ್ರಕಾರ ಟಿಇಟಿ ಸುಪಾನ್ ಬೋರೆ ಮತ್ತು ಸೈನಿಕ ಸೋನು ನಡುವೆ ಟಿಕೆಟ್ ವಿಚಾರವಾಗಿ ವಾಗ್ವಾದ ನಡೆದಿದೆ.
ಕೋಪದ ಭರದಲ್ಲಿ, ಬೋರ್ ಸೇನಾ ಸಿಬ್ಬಂದಿಯನ್ನು ಹೊರಗೆ ತಳ್ಳಿದ್ದಾನೆ. ಈ ವೇಳೆ ಸೈನಿಕ ರೈಲಿನ ಕೆಳಗೆ ಬಿದ್ದಿದ್ದಾರೆ. “ತಕ್ಷಣವೇ ಅವರನ್ನು ಸೇನಾ ಆಸ್ಪತ್ರೆಗೆ ಸಾಗಿಸಲಾಯಿತು. ಅವರು ತಮ್ಮ ಕಾಲು ಕಳೆದುಕೊಂಡಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್ (ಟಿಟಿಇ) ಸುಪಾನ್ ಬೋರೆ ವಿರುದ್ಧ ಕೊಲೆ ಯತ್ನದ ಆರೋಪ ಹೊರಿಸಲಾಗಿದೆ. ಘಟನೆಯಿಂದ ಆತ ತಲೆಮರೆಸಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ನಂತರ ಕೆಲವು ಸಹ ಪ್ರಯಾಣಿಕರು ಟಿಟಿಇಯನ್ನು ಥಳಿಸಿದ್ದಾರೆ ಎಂದು ವರದಿಯಾಗಿದೆ. “ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸುತ್ತಿದ್ದೇವೆ” ಎಂದು ಉತ್ತರ ರೈಲ್ವೆಯ ಅಡಿಯಲ್ಲಿ ಮೊರಾದಾಬಾದ್ ವಿಭಾಗದ ಹಿರಿಯ ಹಣಕಾಸು ವ್ಯವಸ್ಥಾಪಕ ಸುಧೀರ್ ಸಿಂಗ್ ಹೇಳಿದ್ದಾರೆ.
“ಟಿಟಿಇ ಬೋರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆತ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ” ಎಂದು ಸರ್ಕಾರಿ ರೈಲ್ವೆ ಪೊಲೀಸ್ ಸ್ಟೇಷನ್ ಹೌಸ್ ಆಫೀಸರ್ ಅಜಿತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!