Friday, September 12, 2025

ಕಾರ್‌ನಲ್ಲಿ ಕುಳಿತಾಗಲೇ ಹೃದಯಾಘಾತದಿಂದ ಸೇನಾಧಿಕಾರಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೃದಯಾಘಾತದಿಂದ ಸೇನಾಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಜಬಲ್ಪುರದಲ್ಲಿ ವರದಿಯಾಗಿದೆ. ಪಾರ್ಕ್​ ಮಾಡಿದ್ದ ಕಾರಿನಲ್ಲಿ ಡ್ರೈವರ್​ ಸೀಟಿನಲ್ಲಿ ಕುಳಿತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. 

ಮಿಲಿಟರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಮೇಜರ್ ಬಿ. ವಿಜಯ್ ಕುಮಾರ್ ಅವರು ಬೆಳಗ್ಗೆ 11 ಗಂಟೆ ಸುಮಾರಿಗೆ ಸದರ್ ಬಜಾರ್‌ನಲ್ಲಿರುವ ಇಂಡಿಯನ್ ಕಾಫಿ ಹೌಸ್ ಬಳಿ ತಮ್ಮ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಅಲ್ಲೇ ಹೋಗುತ್ತಿದ್ದವರು ಅವರು ಚಾಲಕನ ಸೀಟಿನಲ್ಲಿ ತುಂಬಾ ಹೊತ್ತಿನಿಂದ ಅವರು ಕುಳಿತಿರುವುದನ್ನು ಗಮನಿಸಿ ಅನುಮಾನಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಳಗಿದ್ದ ವ್ಯಕ್ತಿ ಮೇಜರ್ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.

ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು ಮತ್ತು ಮೇಜರ್ ಕುಮಾರ್ ಅವರನ್ನು ಆಂಬ್ಯುಲೆನ್ಸ್ ಮೂಲಕ ಮಿಲಿಟರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಇದನ್ನೂ ಓದಿ