ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಾಕ್ ವಿರುದ್ಧ ಭಾರತೀಯ ಸೇನೆ ಮುಂದುವರಿಸಿರುವ ಆಪರೇಷನ್ ಸಿಂದೂರ ಹಾಗೂ ಬಳಿಕದ ಬೆಳವಣಿಗೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಎಸ್‌ಎಫ್ ಸೇರಿದಂತೆ ದೇಶದ ಗಡಿ ಕಾವಲುಪಡೆ ಮುಖ್ಯಸ್ಥರ ಜೊತೆಗೆ ಮಾತುಕತೆ ನಡೆಸಿದ್ದಾರೆ.
ಅಂತಾರಾಷ್ಟ್ರೀಯ ಗಡಿಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ ಅವರು, ಗಡಿ ಕಾವಲು ಪಡೆಗಳ ಮಹಾನಿರ್ದೇಶಕರಿಂದ ಪ್ರಸ್ತುತ ಪರಿಸ್ಥಿತಿ ಹಾಗೂ ಭದ್ರತೆ ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ಸಂದರ್ಭ ಸಿಐಎಸ್‌ಎಫ್ ಮುಖ್ಯಸ್ಥರೊಂದಿಗೆ ಕೂಡಾ ಚರ್ಚಿಸಿರುವ ಶಾ, ದೇಶದ ವಿಮಾನ ನಿಲ್ದಾಣಗಳಲ್ಲಿನ ಭದ್ರತೆಯ ಬಗ್ಗೆ ಕೂಡಾ ಮಾಹಿತಿ ಪಡೆದುಕೊಂಡಿದ್ದಾರೆ.