ಹೊಸದಿಗಂತ ವರದಿ, ಶಿವಮೊಗ್ಗ:
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ್ಯಾಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಯುವಕರಿಗೆ ಉಚಿತ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಗೌರಾವಧ್ಯಕ್ಷ ಸುಭಾಷ್ಚಂದ್ರ ತೇಜಸ್ವಿ ತಿಳಿಸಿದರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸೈನ್ಯದಲ್ಲಿ ಮಲೆನಾಡು ಭಾಗದವರು ಕಡಿಮೆ ಸಂಖ್ಯೆಯಲ್ಲಿ ಇದ್ದಾರೆ. ಇಲ್ಲಿನವರಿಗೆ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಬಗ್ಗೆ ಮಾಹಿತಿ ಕೊರತೆ ಇದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಯುವಕರಿಗೆ ಸೇನಾ ನೇಮಕಾತಿ ಪ್ರಕ್ರಿಯೆ ಬಗ್ಗೆ ಅಗತ್ಯ ಮಾಹಿತಿ, ತರಬೇತಿ ಮತ್ತು ಸೇನೆಗೆ ಸೇರಲು ಆತ್ಮಸ್ಥೈರ್ಯ ತುಂಬುವುದು ಅಗತ್ಯವಾಗಿದೆ. ಇದನ್ನು ಮನಗಂಡು ಮಾಜಿ ಸೈನಿಕರಿಂದಲೇ ತರಬೇತಿ ನೀಡಲು ನಿರ್ಧರಿಸಿದ್ದೇವೆ ಎಂದರು.
ಫೆಬ್ರವರಿ 25 ರಿಂದ ಮಾರ್ಚ 12ರವರೆಗೆ ಶಿವಮೊಗ್ಗದಲ್ಲಿ ಪೂರ್ವಭಾವಿ ತರಬೇತಿ ಆಯೋಜಿಸಲಾಗಿದೆ. ಮಾಹಿತಿಗೆ ಸುಭಾಷ್ಚಂದ್ರ-7975912094 ರಲ್ಲಿ ಸಂಪರ್ಕಿಸಲು ಕೋರಿದರು.