ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅಶೋಕನಗರದ ಆರ್ಮಿ ಸ್ಕೂಲ್ ಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ.
ಶಾಲೆಯ ಇಮೇಲ್ ಐಡಿಗೆ ಕಿಡಿಗೇಡಿಗಳು ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆಯೊಡ್ಡಿ ಸಂದೇಶ ಕಳುಹಿಸಿದ್ದಾರೆ. ಕೂಡಲೇ ಶಾಲೆಯ ಸಿಬ್ಬಂದಿಗಳು ಅಶೋಕನಗರ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದು, ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ನಂತರ ಇದು ಹುಸಿ ಬಾಂಬ್ ಎಂಬುದು ಖಚಿತವಾಯಿತು.