ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನಲ್ಲಿ ಭಾರತೀಯ ಸೇನಾಪಡೆ ಶನಿವಾರ ಎನ್’ಕೌಂಟರ್ ನಡೆಸಿದ್ದು, ಉಗ್ರರು ಉಗ್ರರನ್ನು ಸದೆಬಡಿದಿದ್ದಾರೆಂದು ತಿಳಿದುಬಂದಿದೆ.
ಕಳೆದ ಒಂದು ವರ್ಷದಿಂದ ಚೆನಾಬ್ ಕಣಿವೆ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಜೈಷ್-ಇ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಉನ್ನತ ಕಮಾಂಡರ್ ಸೈಫುಲ್ಲಾ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ಕೆಟ್ಟ ಮತ್ತು ಪ್ರತಿಕೂಲ ಹವಾಮಾನದ ಹೊರತಾಗಿಯೂ, ಕಿಶ್ತ್ವಾರ್‌ನ ಛಾತ್ರುನಲ್ಲಿ ಪಾಕಿಸ್ತಾನದ ಇಬ್ಬರನ್ನು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಸೇನೆ ತಿಳಿಸಿವೆ.
ಹತ್ಯೆಯಾದ ಉಗ್ರರಿಂದ ಒಂದು ಎಕೆ ಮತ್ತು ಒಂದು ಎಂ4 ರೈಫಲ್ ಸೇರಿದಂತೆ ದೊಡ್ಡ ಪ್ರಮಾಣದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದೆ.