ಹೊಸದಿಗಂತ ಡಿಜಿಟಲ್ ಡೆಸ್ಕ್ :
ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಗುರುವಾರ ಭಾರತೀಯ ಸೇನೆಯ ವಾಹನಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಸೈನಿಕರು ಹುತಾತ್ಮರಾಗಿದ್ದಾರೆ ಭಾರತೀಯ ಸೇನೆ ಅಧಿಕೃತ ಮಾಹಿತಿ ನೀಡಿದೆ.
ಸೇನಾ ಮಾಹಿತಿ ನೀಡಿದ್ದು, ಸೇನಾ ವಾಹನದ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಐವರು ಯೋಧರು ಸಜೀವ ದಹನವಾಗಿದ್ದಾರೆ ಎಂದು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದರ ಲಾಭ ಪಡೆದ ಉಗ್ರರು ವಾಹನದ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ ಇದರಿಂದ ಬೆಂಕಿ ಹೊತ್ತಿಕೊಂಡಿದೆ.
ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ಸೈನಿಕನನ್ನ ತಕ್ಷಣ ರಾಜೌರಿಯ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉತ್ತರ ಕಮಾಂಡ್ ತಿಳಿಸಿದೆ.
ದಾಳಿಕೋರರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದೆ.