ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರೋಗ್ಯ ವಲಯಕ್ಕೆ ಭರ್ಜರಿ ಕೊಡುಗೆಗಳನ್ನು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ 17,473 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.
ಆಯುಷ್ಮಾನ್ ಭಾರತ್ ರೀತಿಯೇ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಫಲಾನುಭವಿಗಳ 5 ಲಕ್ಷ ರೂ. ಚಿಕಿತ್ಸೆಯ ಮಿತಿಯನ್ನು ಪೂರ್ಣಗೊಳಿಸಿದ್ದಲ್ಲಿ, ಹೆಚ್ಚುವರಿಯಾಗಿ ಹೃದ್ರೋಗ ಹಾಗೂ ಕ್ಯಾನ್ಸರ್ ಖಾಯಿಲೆಗಳಿಗೆ 5 ಲಕ್ಷ ರೂ.ವರೆಗೆ, ಇತರೆ ಖಾಯಿಲೆಗಳಿಗೆ 2 ಲಕ್ಷ ರೂ. ವರೆಗೆ ವೈದ್ಯಕೀಯ ವೆಚ್ಚ ಮರುಪಾವತಿ ಮಾಡಲಾಗುವುದು.
ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಪೂರಕವಾಗಿ ರಾಜ್ಯ ವಿಮಾ ಆಸ್ಪತ್ರೆಗಳಿಗೆ ಅಗತ್ಯ ಮೂಲಸೌಲಭ್ಯ ಕಲ್ಪಿಸಲು 51 ಕೋಟಿ ರೂ. ಅನುದಾನ ನಿಗದಿಪಡಿಸಲಾಗುವುದು. ಇದರಡಿ ಆಸ್ಪತ್ರೆಗಳ ಶುಚಿತ್ವ, ಪರಿಕರಗಳ ಖರೀದಿ, ತುರ್ತು ವಿಭಾಗಗಳ ನವೀಕರಣ, ಪ್ರಯೋಗಾಲಯಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.