Friday, June 2, 2023

Latest Posts

ಮಂಗಳೂರಿನ ಎನ್‌ಐಟಿಕೆ ಸ್ಟ್ರಾಂಗ್ ರೂಮ್ ಸುತ್ತ ಬಿಗಿ ಬಂದೋಬಸ್ತ್

ಹೊಸ ದಿಗಂತ ದಿಜಿಟಲ್ ಡೆಸ್ಕ್:

ಮೇ 10 ರಂದು ಸಂಜೆ ಆರು ಗಂಟೆಗೆ ಮತದಾನ ಮುಗಿದಿದ್ದು, ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಗೆ ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿದ್ದು ಇವುಗಳನ್ನು ಎನ್‌ಐಟಿಕೆ ಸ್ಟ್ರಾಂಗ್ ರೂಮ್ ನಲ್ಲಿ ಇರಿಸಲಾಗಿದೆ.

ಇವಿಎಂ ಯಂತ್ರಗಳಿರುವ ಎನ್‌ಐಟಿಕೆ ಸ್ಟ್ರಾಂಗ್ ರೂಮ್ ಕೊಠಡಿಯನ್ನು ಸಂಪೂರ್ಣವಾಗಿ ಅಧಿಕಾರಿಗಳು ಸೀಲ್ ಮಾಡಿದ್ದಾರೆ. ಎನ್ ಐ ಟಿಕೆ ಸುತ್ತ ಪೊಲೀಸರು ಮತ್ತು ಅರೆಸೇನಾಪಡೆ ಹದ್ದಿನ ಕಣ್ಣಿರಿಸಿದ್ದಾರೆ. ಮತ ಎಣಿಕೆಯ ದಿನ ಶನಿವಾರ ಬೆಳಿಗ್ಗೆ ಅಧಿಕಾರಿಗಳು ಅಭ್ಯರ್ಥಿಗಳ ಸಮ್ಮುಖದಲ್ಲಿ ಬಾಗಿಲಿಗೆ ಹಾಕಿದ ಸೀಲ್ ತೆರೆಯಲಿದ್ದಾರೆ.

ನಿಷೇಧಾಜ್ಞೆ ಜಾರಿ
ಇನ್ನೊಂದೆಡೆ ಮತಎಣಿಕೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 13 ರ ಬೆಳಗ್ಗೆ 5 ಗಂಟೆಯಿಂದ ಮದ್ಯರಾತ್ರಿ 12 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ನಿರ್ಬಂಧ
ಚುನಾಯಿತ ಅಭ್ಯರ್ಥಿಯ ವಿಜಯೋತ್ಸವ ಮೆರವಣಿಗೆ, ವಾಸದ ಮನೆ ಹಾಗೂ ಸಾರ್ವಜನಿಕ ಜಾಗದಲ್ಲಿ ಪಟಾಕಿ ಸಿಡಿಸುವುದು, ಸ್ಪೋಟಕ ಹಾಗೂ ಮಾರಕ ವಸ್ತುಗಳ ಸಾಗಾಟ, ಮೆರವಣಿಗೆ ಹಾಗೂ ಪ್ರಚೋದನಕಾರಿ ಭಾಷಣ ಮಾಡುವುದು, ಧ್ವನಿವರ್ಧಕ, ಡಿ.ಜೆ, ಬೈಕ್ ಜಾಥಾ ನಡೆಸಲು ನಿರ್ಬಂಧಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!