ಬಂಧಿತ ಸಚಿವ ಪಾರ್ಥ ಚಟರ್ಜಿಗೆ ನನ್ನ ಮನೆಯೇ ಮಿನಿ-ಬ್ಯಾಂಕ್: ಸ್ಪೋಟಕ ಮಾಹಿತಿ ನೀಡಿದ ಅರ್ಪಿತಾ ಮುಖರ್ಜಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಗಾಳದ ಸಚಿವ ಪಾರ್ಥ ಚಟರ್ಜಿ ಜೊತೆ ಬಂಧಿತರಾಗಿರುವ ಆಪ್ತೆ ಅರ್ಪಿತಾ ಮುಖರ್ಜಿ ಪ್ರಕರಣದ ಬಗ್ಗೆ ಮಾತನಾಡಿದ್ದು, ಸಚಿವ ಪಾರ್ಥ ಚಟರ್ಜಿಯವರು ತಮ್ಮ ಮನೆಯಲ್ಲಿ ಹಣ ಸಂಗ್ರಹಿಸುತ್ತಿದ್ದರು ಮತ್ತು ನಮ್ಮ ಮನೆಯನ್ನು ಮಿನಿ-ಬ್ಯಾಂಕ್ ನಂತೆ ನಡೆಸಿಕೊಳ್ಳುತ್ತಿದ್ದರು ಎಂಬ ಸ್ಪೋಟಕ ಮಾಹಿತಿ ನೀಡಿದ್ದಾರೆ.
ಸಚಿವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ 21 ಕೋಟಿ ರೂ. ನಗದು ಪತ್ತೆಯಾಗಿತ್ತು. ಶನಿವಾರದಂದು ಅರ್ಪಿತಾ ಮತ್ತು ಪಾರ್ಥ ಚಟರ್ಜಿಯನ್ನು ಬಂಧಿಸುವ ಒಂದು ದಿನದ ಮೊದಲು ಆಕೆಯ ಮನೆಯಲ್ಲಿ ಹಣದ ದೊಡ್ಡ ರಾಶಿಯ ದೃಶ್ಯ ಕಂಡುಬಂದಿತ್ತು.
ಅರ್ಪಿತಾ ಮುಖರ್ಜಿ ಅವರು ಜಾರಿ ನಿರ್ದೇಶನಾಲಯಕ್ಕೆ ‘ಎಲ್ಲ ಹಣವನ್ನು ಪಾರ್ಥ ಚಟರ್ಜಿ ಮತ್ತು ಅವರ ಸಹಚರರು ಮಾತ್ರ ಪ್ರವೇಶಿಸುವ ಕೋಣೆಯೊಂದರಲ್ಲಿ ಇಡುತ್ತಿದ್ದರು’ ಎಂದು ಹೇಳಿದ್ದಾರೆ.
ಸಚಿವರು ಪ್ರತಿ ವಾರ ಅಥವಾ 10 ದಿನಗಳಿಗೊಮ್ಮೆ ಅರ್ಪಿತಾ ಮನೆಗೆ ಭೇಟಿ ನೀಡುತ್ತಿದ್ದರು ಎಂದು ಮೂಲಗಳು ಹೇಳಿವೆ.ಆ ಮಹಿಳೆ ಕೂಡ ಅವರ ಆಪ್ತ ಸ್ನೇಹಿತೆ ಎಂದು ಅರ್ಪಿತಾ ಮುಖರ್ಜಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಕೋಣೆಯಲ್ಲಿ ಎಷ್ಟು ಹಣವಿದೆ ಎಂದು ಸಚಿವರು ಎಂದಿಗೂ ಬಹಿರಂಗಪಡಿಸಲಿಲ್ಲ. ಬಂಗಾಳಿ ನಟರೊಬ್ಬರು ಪಾರ್ಥ ಚಟರ್ಜಿ ಅವರನ್ನು ಪರಿಚಯಿಸಿದರು ಮತ್ತು ಇಬ್ಬರೂ 2016 ರಿಂದ ಹತ್ತಿರವಾಗಿದ್ದರು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!