ನಟಿ ಮನೆಯಲ್ಲಿ ಸಿಕ್ಕಿತು ಕೋಟಿ, ಕೋಟಿ ಹಣ: ಇಡಿಯಿಂದ ಅರ್ಪಿತಾ ಮುಖರ್ಜಿ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿಕ್ಷಕರ ನೇಮಕಾತಿ ಹಗರಣದ (SSC scam) ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಬಂಧನದ ಬೆನ್ನಲ್ಲೇ ಅವರ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಅವರ ಬಂಧನ ಮಾಡಲಾಗಿದೆ.
ನಿನ್ನೆ ಇಡಿ ಅಧಿಕಾರಿಗಳು ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಕಡೆಗಳಲ್ಲಿ ದಾಳಿ ನಡೆಸಿ ತನಿಖೆ ನಡೆಸಿ ಅರ್ಪಿತಾ ಮನೆಯಲ್ಲಿ 20 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿತ್ತು.
ಮುಂಜಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾಳ ಸರ್ಕಾರದಲ್ಲಿ ಕೈಗಾರಿಕೆ ಸಚಿವ, ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವನ್ನ ಬಂಧನ ಮಾಡಲಾಗಿದೆ. ಇದರ ಬೆನ್ನಲ್ಲೇ ಅವರ ಆಪ್ತೆ ಅರ್ಪಿತಾ ಅವರನ್ನು ಬಂಧನ ಮಾಡಿದ್ದಾರೆ. ಜೊತೆಗೆ ಮಹತ್ವದ ದಾಖಲೆ ವಶಕ್ಕೆ ಪಡೆದುಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯದ ಮಾಹಿತಿ ಪ್ರಕಾರ, ಅರ್ಪಿತಾ ಮನೆಯಲ್ಲಿ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಕೆಲವೊಂದು ಮಹತ್ವದ ದಾಖಲೆಗಳು ಸಿಕ್ಕಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!