ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಸೈನಿಕ ಶಾಲೆಯಲ್ಲಿ ವ್ಯವಸ್ಥೆ

ದಿಗಂತ ವರದಿ ವಿಜಯಪುರ:

ನಡೆದಾಡುವ ದೇವರಾದ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ಅವರ ಅಂತಿಮ ದರುಶನದ ವ್ಯವಸ್ಥೆಯನ್ನು ನಗರದ ಸೈನಿಕ ಶಾಲೆಯಲ್ಲಿ ಮಾಡಲಾಗಿದೆ.
ಮಂಗಳವಾರ ಬೆಳಗ್ಗೆ ಇಲ್ಲಿನ ಜ್ಞಾನಯೋಗಾಶ್ರಮದಿಂದ ಸೈನಿಕ ಶಾಲೆ ವರೆಗೆ ಶ್ರೀಗಳ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ತರಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದು ಬರುತ್ತಿದ್ದು, ಭಕ್ತರ ರೋಧನ ಮುಗಿಲು ಮುಟ್ಟುವಂತಾಗಿದೆ.
ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಿಯಾಗಿ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!