Thursday, August 11, 2022

Latest Posts

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಟ ಪುನೀತ್ ಅಂತಿಮ ದರುಶನಕ್ಕೆ ವ್ಯವಸ್ಥೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ಪುನೀತ್ ರಾಜಕುಮಾರ್ ಅವರ ಅಂತಿಮ ದರುಶನಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ.
ಸದಾಶಿವನಗರದ ಪುನೀತ್ ರಾಜಕುಮಾರ್ ನಿವಾಸದಿಂದ ಕಂಠೀರವ ಸ್ಟೇಡಿಯಂಗೆ ಪಾರ್ಥಿವ ಶರೀರ ಸ್ಥಳಾಂತರ ಮಾಡಲಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ಭಾರಿ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದು, ಯಾವುದೇ ಲೋಪ ಉಂಟಾಗದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ಅಭಿಮಾನಿಗಳು ಸರತಿಸಾಲಿನಲ್ಲಿ ಆಗಮಿಸಿ ದರುಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss