ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಪಾರ್ಥೀವ ಶರೀರವನ್ನು ಬ್ಯಾಂಕಾಕ್‌ನಿಂದ ಇಂದು ಬೆಂಗಳೂರಿಗೆ ತರಲಾಗುತ್ತದೆ.
ಇಂದು ಮಧ್ಯರಾತ್ರಿ ಒಂದು ಗಂಟೆ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ಗೆ ಪಾರ್ಥೀವ ಶರೀರ ತಲುಪಲಿದ್ದು, ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಲ್ಲೇಶ್ವರಂನ ಆಟದ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರಲಿದೆ.
ರಾತ್ರಿಯಿಂದಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ನಂತರ ಬೆಂಗಳೂರಿನ ಹರೀಶ್ಚಂದ್ರ ಘಾಟ್‌ನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.