ಪ್ರವೀಣ್ ಹಂತಕರನ್ನು ಜಾತಿ ಧರ್ಮ ಪಕ್ಷ ಲೆಕ್ಕಿಸದೆ ಮುಲಾಜಿಲ್ಲದೆ ಬಂಧಿಸಿ: ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಸುಳ್ಯದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!