Tuesday, March 28, 2023

Latest Posts

ಸಚಿವ ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಬಂಧಿಸಿ : ಸಲೀಂ ಅಹ್ಮದ್ ಆಕ್ರೋಶ

ಹೊಸದಿಗಂತ ವರದಿ ಹುಬ್ಬಳ್ಳಿ :

ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರನ್ನು ತಕ್ಷಣ ಬಂಧಿಸಬೇಕು. ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಈ ರೀತಿ ಮಾತನಾಡುತ್ತಿರುವುದು ಅವರ ಪಕ್ಷದ ಹಾಗೂ ವಯಕ್ತಿಕ ಬದ್ಧತೆ ಏನೆಂಬುದು ಗೊತ್ತಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ನಂತೆ ಹೊಡೆದು ಹಾಕಬೇಕು ಎಂಬ ಅಶ್ವತ್ಥ ನಾರಾಯಣ ಅವರ ಹೇಳಿಕೆ ಗುರುವಾರ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದರು.

ಶಾಂತಿ, ನೆಮ್ಮದಿ ಹಾಗೂ ಸಹ ಬಾಳವೆಯ ವಿಚಾರವನ್ನು ಬಿಟ್ಟು ಬರಿ ಹೊಡಿ-ಬಡಿ ಎನ್ನುವ ಸಂಸ್ಕೃತಿ ಬಿಜೆಪಿ ಅವರದ್ದಾಗಿದೆ. ಬಿಜೆಪಿ ಸರ್ಕಾರದ ಆಯುಷ್ಯ ಇನ್ನೂ 60 ದಿನ ಮಾತ್ರ. ಆದರಿಂದ ಹುಚ್ಚರಂತೆ ಮಾತನಾಡುತ್ತಿದ್ದಾರೆ ಎಂದರು.

ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಬಾಯಿಗೆ ಬಂದ ಹಾಗೇ ಮಾತನಾಡುತ್ತಿದ್ದಾರೆ. ಶೇ. 40 ರಷ್ಟು ಕಮಿಷನ್ ಜೊತೆ ಚುನಾವಣೆ ಮಾಡಲು ಟೆಂಡರ್ ನಲ್ಲಿ ಹಣ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ಸಂಪೂರ್ಣ ವಿಫಲವಾಗಿದೆ. ಭ್ರಷ್ಟಾಚಾರದಲ್ಲಿ ಮುಳಗಿದೆ. ಸರ್ಕಾರ ಅಭಿವೃದ್ಧಿ, ಯುವಕರಿಗೆ ಉದ್ಯೋಗ, ಬಡವರಿಗೆ ಮನೆ ಕೊಡುವುದರ ಬಗ್ಗೆ ಮಾತನಾಡದ ಅವರು ದ್ವೇಷ ಭಾವನೆ‌ ಸೃಷ್ಟಿಸುವುದರ‌ ಬಗ್ಗೆ ಮಾತನಾಡುತ್ತಿದ್ದಾರೆ. ಜನರ ತಪ್ಪು ದಾರಿಗೆ ತರುವ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ಜನರು ಪ್ರಬುದ್ದರಾಗಿದ್ದಾರೆ. ನಾಲ್ಕು ವರ್ಷದ ಆಳ್ವಿಕೆಯಲ್ಲಿ ಸರ್ಕಾರದ ಬರಿ ಭ್ರಷ್ಟಾಚಾರ ಮಾಡಿದೆ. ಇದು ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟಾಚಾರದ ಪಾರ್ಟಿ ಯಾಗಿದೆ ಎಂದು ಹರಿಹಾಯ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!