ಅಕ್ರಮವಾಗಿ ಭಾರತ ಪ್ರವೇಶಿಸಿದ ಬಾಂಗ್ಲಾ ಪ್ರಜೆಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯಾವುದೇ ಪ್ರಯಾಣ ದಾಖಲೆಗಳಿಲ್ಲದೆ ಅಕ್ರಮವಾಗಿ ಭಾರತ ಪ್ರವೇಶಿಸಿದ ಬಾಂಗ್ಲಾದೇಶದ ಪ್ರಜೆಯನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ.

ನಕಲಿ ಗುರುತಿನ ದಾಖಲೆಗಳನ್ನು ಒದಗಿಸಿದ ಸೆಲೀಮ್ ಮತ್ತುಬ್ಬರ್ ಎಂಬಾತನನ್ನು ಕೋಲ್ಕತ್ತಾದ ಹೋಟೆಲ್‌ವೊಂದರಿಂದ ಬಂಧಿಸಲಾಯಿತು.ಈತ ಮಾಜಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಸ್ಥಳೀಯ ನಾಯಕರಾಗಿದ್ದು, ಎರಡು ವರ್ಷಗಳ ಹಿಂದೆ ಕೋಲ್ಕತ್ತಾಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಬಂಧಿತ ಆರೋಪಿ ವಿರುದ್ಧ ವಿದೇಶಿ ಕಾಯ್ದೆ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ.ತನಿಖೆಯ ಸಮಯದಲ್ಲಿ, ರಬಿ ಶರ್ಮಾ ಹೆಸರಿನಲ್ಲಿದ್ದ ನಕಲಿ ಆಧಾರ್ ಕಾರ್ಡ್ ವಶಕ್ಕೆ ಪಡೆದಿದ್ದಾರೆ.ಇದರ ಬಳಕೆಯಿಂದ ಆತ ನಕಲಿ ಭಾರತೀಯ ಪಾಸ್ ಪೋರ್ಟ್ ಪಡೆದಿದ್ದ ಎನ್ನಲಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!