Sunday, October 1, 2023

Latest Posts

ಅಂಕೊಲದಲ್ಲಿ ಮಾದಕ ವಸ್ತು ಸೇವಿಸಿದ ಯುವಕನ ಬಂಧನ

ಹೊಸದಿಗಂತ ವರದಿ ಅಂಕೋಲಾ:

ಮಾದಕ ವಸ್ತು ಸೇವನೆ ಮಾಡಿದಂತೆ ವರ್ತನೆ ತೋರುತ್ತಿದ್ದ ವ್ಯಕ್ತಿಯೋರ್ವನನ್ನು ಅಂಕೋಲಾ ಪೊಲೀಸರು ವಶಕ್ಕೆ ಪಡೆದುಕೊಂಡು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಆತ ಮಾದಕ ಗಾಂಜಾ ಸೇವಿಸಿರುವುದು ಧೃಡಪಟ್ಟಿದೆ.

ವಸತಿಗೃಹವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರವಾರ ಬೈತಕೋಲ ನಿವಾಸಿ ಗಿರೀಶ ಚಂದ್ರ ಭಂಡಾರಿ (19) ಬಂಧಿತ ಆರೋಪಿಯಾಗಿದ್ದು ಈತ ಪಟ್ಟಣದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರು ಕುಳಿತುಕೊಳ್ಳುವ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದಂತ ಸ್ಥಿತಿಯಲ್ಲಿ ಕಂಡು ಬಂದಿದ್ದು ಬಾಯಿಂದ ಘಾಟು ವಾಹನೆ ಬರುತ್ತಿದ್ದರಿಂದ ಕಾರವಾರ ವೈದ್ಯಕೀಯ ಕಾಲೇಜು ಸಂಸ್ಥೆಯಲ್ಲಿ ಈ ಕುರಿತು ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಡ ಪಟ್ಟಿದೆ ಹಾಗೂ ಆರೋಪಿತ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿ ಕೊಂಡಿರುವುದಾಗಿ ತಿಳಿದು ಬಂದಿದೆ.

ಪಿ.ಎಸ್. ಐ ಉದ್ದಪ್ಪ ಧರೆಪ್ಪನವರ್ ಆರೋಪಿತನ ವಿಚಾರಣೆ ನಡೆಸಿದ್ದು ಪಿ.ಎಸ್. ಐ ಸುನೀಲ ಹುಲ್ಗೊಳ್ಳಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!