ಹೊಸದಿಗಂತ ಮಂಡ್ಯ:
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಭಾರೀ ಅವ್ಯವಹಾರದ ವಿರುದ್ಧ ಹೋರಾಟ ನಡೆಸಲು ಮಂಡ್ಯ ನಗರದಿಂದ ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಬಿಜೆಪಿ ಪಕ್ಷದ ಕಚೇರಿಯಿಂದ ಮೆರವಣಿಗೆ ಮೂಲಕ ಜಯಚಾಮರಾಜೇಂದ್ರ ಒಡೆಯರ್ ವೃತ್ತಕ್ಕೆ ಬಂದ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪಕ್ಷದ ಜಿಲ್ಲಾಧ್ಯಕ್ಷ ಡಾ. ಎನ್.ಎಸ್.ಇಂದ್ರೇಶ್, ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಜಯರಾಮ್, ಸಾದೊಳಲು ಸ್ವಾಮಿ, ಟಿ.ಎಸ್.ವಿವೇಕ್, ಚೇತನ್ ಶಿವರಾಮೇಗೌಡ, ಸಿ.ಟಿ. ಮಂಜುನಾಥ್, ನಿತ್ಯಾನಂದ, ನಾಗಾನಂದ, ನರಸಿಂಹಮೂರ್ತಿ, ಶಿವಕುಮಾರ ಆರಾಧ್ಯ, ಆನಂದ್, ನವೀನ್, ಭೀಮೇಶ್, ಜವರೇಗೌಡ, ನರಸಿಂಹ ಸೇರಿದಂತೆ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು, ಪೊಲೀಸ್ ವಾಹನದಲ್ಲಿ ಪೆರೇಡ್ ಮೈದಾನಕ್ಕೆ ಕರೆದೊಯ್ದು ಕೆಲಕಾಲ ಇಟ್ಟುಕೊಂಡು ನಂತರ ಬಿಡುಗಡೆ ಮಾಡಿದರು.