SHOCKING| ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸ್ಕೆಚ್ ಹಾಕಿದ್ದ ಐವರು ಶಂಕಿತ ಉಗ್ರರ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಐವರು ಶಂಕಿತ ಉಗ್ರರನ್ನು ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಇವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಯ್ಯದ್ ಸುಹೇಲ್, ಉಮರ್, ಜುನೇದ್ ಮುದಾಶೀರ್ ಹಾಗೂ ಜಾಹೀದ್ ಎಂಬಾತನನನ್ನು ಬಂಧಿಸಲಾಗಿದೆ.

ವಿಧ್ವಂಸಕ ಕೃತ್ಯಗಳಿಗೆ ಬೇಕಾದ ವಸ್ತುಗಳನ್ನು ಒಟ್ಟುಗೂಡಿಸುತ್ತಿದ್ದ ವೇಳೆ ಶಂಕಿತ ಉಗ್ರರು ಸಿಕ್ಕಿಬಿದ್ದಿದ್ದಾರೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

2017ರ ಅಕ್ಟೋಬರ್‌ನಲ್ಲಿ ಬೆಂಗಳೂರಿನ ಆರ್.ಟಿ. ನಗರದಲ್ಲಿ ನಡೆದಿದ್ದ ಮೂವರ ಕಿಡ್ನ್ಯಾಪ್, ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ಆರೋಪಿಗಳ ಜೊತೆ ಇವರು ಸಂಪರ್ಕದಲ್ಲಿದ್ದರು. ಅಷ್ಟೇ ಅಲ್ಲದೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರರ ಜೊತೆಯೂ ಸಂಪರ್ಕದಲ್ಲಿದ್ದರು ಎನ್ನುವ ಮಾಹಿತಿ ತಿಳಿದಿದೆ. ಪೊಲೀಸರು ಐವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!