ಕೇಜ್ರಿವಾಲ್ ಬಂಧನ: ರಾಮ್‌ಲೀಲಾ ಮೈದಾನದಲ್ಲಿ ‘ಲೋಕತಂತ್ರ ಬಚಾವೋ’ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಜಾರಿ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ ಕ್ರಮ ಖಂಡಿಸಿ ವಿಪಕ್ಷಗಳ ಮೈತ್ರಿಕೂಟವಾದ I.N.D.I.A ಇಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ‘ಲೋಕತಂತ್ರ ಬಚಾವೋ’ ಪ್ರತಿಭಟನೆ ಹಮ್ಮಿಕೊಂಡಿದೆ.

ಈ ಪ್ರತಿಭಟನೆಯಲ್ಲಿ ಅರವಿಂದ್ ಕೇಜ್ರಿವಾಲ್‌ರ ಪತ್ನಿ ಸುನಿತಾ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಎನ್‌ಸಿಪಿ, ಟಿಎಂಸಿ ಶಿವಸೇನೆ ಸೇರಿದಂತೆ I.N.D.I.A ಒಕ್ಕೂಟದ ನಾಯಕರು ಸಾಥ್ ನೀಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!