ವಿಐಪಿ ದಾಳಿಗೆ ಸಂಚು ರೂಪಿಸುತ್ತಿದ್ದ ಎಲ್‌ ಇ ಟಿ ಉಗ್ರನ ಬಂಧನ

ಹೊಸದಿಗಂತ ಡಿಜಿಲ್‌ ಡೆಸ್ಕ್:‌

ದೇಶದ ವಿಐಪಿಗಳು ಮತ್ತು ರಕ್ಷಣಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಗಡಿ ಭದ್ರತಾ ಪಡೆಗಳು ಬಂಧಿಸಿವೆ.

ಜಮ್ಮು ಕಾಶ್ಮೀರದ ರಾಫಿಯಾಬಾದ್‌ ಮತ್ತು ಸಪೋರ್‌ ಪ್ರದೇಶಗಳಲ್ಲಿ ರಕ್ಷಣಾ ಸಿಬ್ಬಂದಿಗಳು ಮತ್ತು ಕೆಲವು ಪ್ರಮುಖ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಆತ ಸಂಚು ರೂಪಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ರಕ್ಷಣಾ ಪಡೆಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು “ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ರಫಿಯಾ ಪೋಲೀಸರು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದು ಒಬ್ಬ ಉಗ್ರನ್ನು ಬಂಧಿಸಲಾಗಿದೆ. ಬಂಧಿತನಿಂದ ಪಿಸ್ತೂಲ್‌ ಸೇರಿದಂತೆ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿರುವ ಕುರಿತು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!