ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಮತ್ತಷ್ಟು ನಾಯಕರ ಬಂಧನ: ಸಂಜಯ್ ಸಿಂಗ್ ಅರೆಸ್ಟ್ ವಿರುದ್ಧ ಕೇಜ್ರಿವಾಲ್ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಎಪಿ ನಾಯಕ ಸಂಜಯ್ ಸಿಂಗ್ ಅವರ ಬಂಧನ ಸಂಪೂರ್ಣ ಕಾನೂನುಬಾಹಿರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ಮನೆ ಮೇಲೆ ಇಂದು ಬೆಳಗ್ಗೆ ದಾಳಿ ಮಾಡಿದ್ದ ಜಾರಿ ನಿರ್ದೇಶನಾಲಯ(ಇಡಿ), ಸಂಜೆ ಅವರನ್ನು ಬಂಧಿಸಿದೆ.

ಬಂಧನ ವಿರೋಧಿಸಿ ಕೇಂದ್ರ ಸರಕಾರ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, 2024 ರ ಲೋಕಸಭೆ ಚುನಾವಣೆಗೆ ಮುನ್ನ ಮತ್ತಷ್ಟು ವಿರೋಧ ಪಕ್ಷದ ನಾಯಕರನ್ನು ಬಂಧಿಸುತ್ತಾರೆ ಎಂದು ಹೇಳಿದ್ದಾರೆ.

ಸಂಜಯ್ ಸಿಂಗ್ ಅವರ ಬಂಧನವು ಸಂಪೂರ್ಣವಾಗಿ ಕಾನೂನುಬಾಹಿರ. ಇದು(ಪ್ರಧಾನಿ ನರೇಂದ್ರ) ಮೋದಿ ಜಿ ಅವರ ಭಯವನ್ನು ತೋರಿಸುತ್ತದೆ. ಅವರು ಇನ್ನೂ ಅನೇಕ ವಿರೋಧ ಪಕ್ಷದ ನಾಯಕರನ್ನು ಚುನಾವಣೆಯವರೆಗೆ ಬಂಧಿಸುತ್ತಾರೆ ಎಂದು ಪೋಸ್ಟ್ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!