ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಭಯೋತ್ಪಾದನೆ ಘಟನೆಗಳೊಂದಿಗೆ ಸಂಬಂಧ ಹೊಂದಿರುವ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನು ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ಬಂಧಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿರುವ ಹಿಜ್ಬುಲ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಶಂಕಿತ ಕಾರ್ಯಕರ್ತನನ್ನು ದೆಹಲಿ ಪೊಲೀಸ್ ವಿಶೇಷ ದಳವು ಬಂಧಿಸಿದೆ.
ಉಗ್ರನನ್ನು ಜಾವೇದ್ ಮಟ್ಟೂ ಎಂದು ಗುರುತಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವಾರು ಭಯೋತ್ಪಾದಕ ಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಹೇಳಲಾಗಿದೆ.
ಪೊಲೀಸರ ಪ್ರಕಾರ, ಆರೋಪಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅನೇಕ ಭಯೋತ್ಪಾದಕ ಘಟನೆಗಳಲ್ಲಿ ವಾಟೆಂಡ್ ವ್ಯಕ್ತಿ ಆಗಿದ್ದ.