ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಮೂಲದ ಮಾಡೆಲ್ ಕಮ್ ನಟಿಯೊಬ್ಬರನ್ನು ಅಕ್ರಮವಾಗಿ ಬಂಧಿಸಿ, ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಡೈರೆಕ್ಟರ್ ಜನರಲ್ ಶ್ರೇಣಿಯ ಒಬ್ಬರು, ಇನ್ಸ್ ಪೆಕ್ಟರ್ ಜನರಲ್ ಮತ್ತು ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪಿಎಸ್ ಆರ್ ಆಂಜನೇಯುಲು , ಕಂಠಿ ರಾಣಾ ಟಾಟಾ ಮತ್ತು ವಿಶಾಲ್ ಗುನ್ನಿ ಅಮಾನತುಗೊಂಡ ಮೂವರು ಹಿರಿಯ ಅಧಿಕಾರಿಗಳಾಗಿದ್ದಾರೆ.
ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದ ಆಡಳಿತದ ಇರುವಾಗ ನಟಿ ಪೊಲೀಸರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ಕಾರ್ಪೋರೇಷನ್‌ನ ಉನ್ನತ ಕಾರ್ಯನಿರ್ವಾಹಕರ ವಿರುದ್ಧ ತಾನು ಈ ಹಿಂದೆ ದಾಖಲಿಸಿದ ಪ್ರಕರಣವನ್ನು ಹಿಂದೆಗೆದುಕೊಳ್ಳಬೇಕು. ಇಲ್ಲದಿದ್ದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದರು. ಅಲ್ಲದೇ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು ಎಂದು ನಟಿ ಆರೋಪಿಸಿದ್ದರು ಎನ್ನಲಾಗಿದೆ.