ಮುನಿರತ್ನ ಅರೆಸ್ಟ್: ಸಮರ್ಥಿಸಿಕೊಳ್ಳುವ ಪ್ರಶ್ನೆಯೇ ಇಲ್ಲ.. ಆರ್.ಅಶೋಕ್ ಖಡಕ್ ಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಶಾಸಕ ಮುನಿರತ್ನ ಅವರನ್ನು ಬಿಡುಗಡೆಯಾದ ಬೆನ್ನಲ್ಲೇ ರಾಮನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ದಬ್ಬಾಳಿಕೆ ಪ್ರಕರಣ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಮತ್ತು ಮುನಿರತ್ನ ಬಂಧನದ ಬಗ್ಗೆ ವಿರೋಧ ಪಕ್ಷದ ನಾಯಕ ಅಶೋಕ್ ಮಾತನಾಡಿ, ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಘಟನೆಯ ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಇದು ಯಾರನ್ನೂ ರಕ್ಷಿಸುವ ವಿಚಾರವಲ್ಲ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!