ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ ಬೆಂಗಳೂರಿನ ಐವರು ಶಂಕಿತ ಉಗ್ರರ ಸೆರೆ ಪ್ರಕರಣ NIA ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರವನ್ನು ಬರೆದಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರಿಂದ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು.ಈ ವೇಳೆ ಐದನೇ ಆರೋಪಿಯ ಮನೆಯಲ್ಲಿ ನಾಲ್ಕು ಜೀವಂತ ಗ್ರೆನೇಡ್ ಗಳು ಕೂಡ ಪತ್ತೆಯಾಗಿದ್ದವು.
ಈ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಪ್ರಕರಣ ಸಂಬಂಧ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ ( NIA) ಮೂಲಕ ನಡೆಸುವಂತೆ ಆಗ್ರಹಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ .