ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಭಯೋತ್ಪಾದಕರ ಬಂಧನ: ಇವರ ಗುರಿಯೇನು ಗೊತ್ತೇ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿಯವರ ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕ ಘಟಕವನ್ನು ಭೇದಿಸಲಾಗಿದ್ದು ಪಾಟ್ನಾದಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇವರು ಜು.12 ರ ಪ್ರಧಾನಿ ಭೇಟಿ ಸಂದರ್ಭದಲ್ಲಿ ಹತ್ಯೆಯ ಸಂಚು ರೂಪಿಸಿದ್ದರು ಎನ್ನಲಾಗಿದೆ. ಅಲ್ಲದೇ 2047ರ ವೇಳೆಗೆ ಭಾರತವನ್ನು ಸಂಪೂರ್ಣವಾಗಿ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ.

ವರದಿಗಳ ಪ್ರಕಾರ ಇಬ್ಬರು ಭಯೋತ್ಪಾದಕರನ್ನು ಅಥರ್ ಪರ್ವೇಜ್ ಮತ್ತು ಎಂಡಿ ಜಲಾಲುದ್ದೀನ್ ಎಂದು ಗುರುತಿಸಲಾಗಿದೆ. ಪ್ರಧಾನಿ ಮೋದಿ ಅವರ ಭೇಟಿಗೆ 15 ದಿನಗಳ ಮೊದಲು ಶಂಕಿತ ಭಯೋತ್ಪಾದಕರಿಗೆ ಫುಲ್ವಾರಿ ಷರೀಫ್‌ನಲ್ಲಿ ತರಬೇತಿ ನೀಡಲಾಗಿತ್ತುಮತ್ತು ಜುಲೈ 6 ಮತ್ತು 7 ರಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಲು ಸಂಚು ರೂಪಿಸಲು ಸಭೆಗಳನ್ನು ನಡೆಸಿದ್ದರು. ಖಚಿತ ಮಾಹಿತಿಯ ಮೇರೆ ಪುಲ್ವಾರಿಷರೀಫ್‌ ಕಛೆರಿಯ ಮೇಲೆ ಬಿಹಾರ ಪೋಲೀಸರು ದಾಳಿ ನಡೆಸಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಈ ಸಂದರ್ಭದಲ್ಲಿ ‘2047 ಇಂಡಿಯಾ ಇಸ್ಲಾಮಿಕ್ ಇಂಡಿಯಾದ ಆಳ್ವಿಕೆಯ ಕಡೆಗೆ’ ಎಂದು ಬರೆದುಕೊಂಡಿದ್ದ ಕರಪತ್ರವು ದೊರಕಿದೆ ಹಾಗೂ ಹಲವು ಅನುಮಾನಾಸ್ಪದ ದಾಖಲೆಗಳೂ ಪತ್ತೆಯಾಗಿದೆ. ಜೊತೆಗೆ ಪಿಎಫ್‌ಐ ಗೆ ಸಂಂದಿಸಿದ 25 ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ಸಂಭಾವ್ಯ ಭಯೋತ್ಪಾದಕ ಘಟಕ ಕಾರ್ಯನಿರ್ವಹಿಸುತ್ತಿದೆ ಎಂದು ಗುಪ್ತಚರ ದಳಕ್ಕೆ ಮಾಹಿತಿ ಸಿಕ್ಕಿತ್ತು. ಮಾಹಿತಿ ಆಧಾರದ ಮೇಲೆ ಪೊಲೀಸರು ಮತ್ತು ಕೇಂದ್ರ ಏಜೆನ್ಸಿಗಳು ಜುಲೈ 11 ರಂದು ನಯಾ ಟೋಲಾ ಪ್ರದೇಶದ ಮೇಲೆ ದಾಳಿ ನಡೆಸಿ ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಕೇರಳ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ತಮಿಳುನಾಡು ಮತ್ತು ಇತರ ಹಲವು ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಯುವಕರು ಭಯೋತ್ಪಾದಕ ಸಂಚು ರೂಪಿಸಲು ತರಬೇತಿ ಪಡೆಯಲು ಈ ಸ್ಥಳಕ್ಕೆ ಬರುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಬಂಧಿತರಿಬ್ಬರೂ ಭಾರತದಲ್ಲಿದ್ದುಕೊಂಡೇ ಪಾಕಿಸ್ತಾನ, ಬಾಂಗ್ಲಾದೇಶ, ಟರ್ಕಿ ಸೇರಿದಂತೆ ಹಲವು ಇಸ್ಲಾಮಿಕ್ ರಾಷ್ಟ್ರಗಳಿಂದ ದೇಶವಿರೋಧಿ ಅಭಿಯಾನ ನಡೆಸಲು ಹಣ ಪಡೆಯುತ್ತಿದ್ದರು ಎಂದು ಪೊಲೀಸರು ಬಹಿರಂಗಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!