ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿಗೆ ಸಂಬಂಧಿಸಿದ ಪ್ರಮುಖ ಬೆಳವಣಿಗೆಯಲ್ಲಿ, ಮುಂಬೈ ಅಪರಾಧ ವಿಭಾಗವು ಗುಜರಾತ್‌ನ ಭುಜ್‌ನಿಂದ ಇಬ್ಬರು ಶಂಕಿತರನ್ನು ಬಂಧಿಸಿದೆ.

ಅಪರಾಧ ವಿಭಾಗದ ಅಧಿಕಾರಿಗಳ ಪ್ರಕಾರ, ಬಂಧಿತ ಆರೋಪಿಗಳನ್ನು ಬಿಹಾರದ ಪಶ್ಚಿಮ ಚಂಪಾರಣ್ ನ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್(21), ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧ ಈಗಾಗಲೇ ಕಳ್ಳತನ ಮತ್ತು ಅಪಹರಣ ಪ್ರಕರಣಗಳು ದಾಖಲಾಗಿವೆ.

ಬಾಂದ್ರಾ ಮುಂಬೈ ಪೊಲೀಸರು ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆಕ್ಷನ್ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸಲ್ಮಾನ್ ಖಾನ್ ಅವರ ಅಂಗರಕ್ಷಕನ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!