Tuesday, March 28, 2023

Latest Posts

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಹೊಸ ದಿಗಂತ ವರದಿ , ಸಿದ್ದಾಪುರ:

ನೆಲ್ಯಹುದಿಕೇರಿ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ನೆಲ್ಯಹುದಿಕೇರಿ ನಿವಾಸಿ ಆಸಿಬ್, ಮೋಹನ್ ಹಾಗೂ ಎಮ್ಮೆಮಾಡು ಗ್ರಾಮದ ಮಹಮ್ಮದ್ ಆಸೀಫ್ ಗಾಂಜಾ ಸಾಗಿಸುತ್ತಿದ್ದ ಸಂದರ್ಭ ಸಿದ್ದಾಪುರ ಪೊಲೀಸರು ಹಾಗೂ ಜಿಲ್ಲಾ ಕ್ರೈಂ ಪೊಲೀಸರು ದಾಳಿ ನಡೆಸಿ, ಆರೋಪಿಗಳಿಂದ ಸುಮಾರು 1 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಅಲ್ಲದೆ ಕೃತ್ಯಕ್ಕೆ ಬಳಸಿದ ಕಾರಿನೊಂದಿಗೆ ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ದಿಲೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!