ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಷ್ಕರ್ ಎ ತೋಯ್ಬಾ ಭಯೋತ್ಪಾದಕ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಜಮ್ಮು ಕಾಶ್ಮೀರ ಪೋಲೀಸರು ಹಾಗೂ ಭದ್ರತಾ ಪಡೆಗಳು ಕಾಶ್ಮೀರದ ಬದ್ಗಾಮ್ ನಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಗ್ರೆನೇಡ್, ಎರಡು ಪಿಸ್ತೂಲು ಹಾಗೂ 15 ಸುತ್ತು ಬಳಸಬಹುದಾದ ಎ.ಕೆ.47 ಮ್ಯಾಗಝೀನ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರನ್ನು ಜಾಹಿದ್ ಅಹ್ಮದ್ ಶೇಖ್ ಹಾಗೂ ಸಾಹಿಲ್ ಬಶೀರ್ ದಾರ್ ಎಂದು ಗುರುತಿಸಲಾಗಿದ್ದು ಪ್ರಕರಣ ದಾಖಲಿಸಿ ಹೆಚ್ಚಿನ ತನಿಕೆ ನಡೆಸಲಾಗುತ್ತಿದೆ.