ಜಮ್ಮು ಕಾಶ್ಮೀರದಲ್ಲಿ ಇಬ್ಬರು ಎಲ್‌ಇಟಿ ಟಿಆರ್‌ಎಫ್ ಉಗ್ರರ ಬಂಧನ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್)/ಲಷ್ಕರ್-ಎ-ತೊಯ್ಬಾ (ಎಲ್‌ಇಟಿ)ಗೆ ನಂಟು ಹೊಂದಿರುವ ಇಬ್ಬರು ಸ್ಥಳೀಯ ಭಯೋತ್ಪಾದಕರನ್ನು ಶ್ರಿನಗರ ಪೋಲೀಸರು ಬಂಧಿಸಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತರಿಂದ 15 ಪಿಸ್ತೂಲ್‌ಗಳು, 30 ಮ್ಯಾಗಜೀನ್‌ಗಳು ಮತ್ತು 300 ಸುತ್ತುಗಳಿಗೆ ಬಳಸಬಹುದಾದ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಕಾಶ್ಮೀರ ಪೋಲೀಸ್‌ ಐಜಿಪಿ ವಿಜಯ್‌ ಕುಮಾರ್‌ ತಿಳಿಸಿರುವುದಾಗಿ ಮೂಲಗಳು ವರದಿ ಮಾಡಿವೆ. “ಇಬ್ಬರು ಎಲ್‌ಇಟಿ ಟಿಆರ್‌ಎಫ್ ಗೆ ಸೇರಿದ ಉಗ್ರರನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ. ಇದು ಕಾಶ್ಮೀರ ಪೋಲೀಸರಿಗೆ ಸಿಕ್ಕ ಅಭೂತಪೂರ್ವ ಯಶಸ್ಸು” ಎಂದು ಕಾಶ್ಮೀರ ಪೋಲೀಸ್‌ ಇಲಾಖೆ ಟ್ವೀಟ್‌ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!