ಮಡಿಕೇರಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಹೊಸದಿಗಂತ ವರದಿ ಮಡಿಕೇರಿ:

ಸುಂಟಿಕೊಪ್ಪದ ಹೊಟೇಲ್ ಒಂದರಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಸುಂಟಿಕೊಪ್ಪ ನಿವಾಸಿಯಾದ ಅಮ್ರದ್ ಶರೀಫ್ (34) ಹಾಗೂ ಫಯಾಜ್.ಎಂ.ಎಸ್ (34) ಎಂಬವರನ್ನು ಬಂಧಿಸಿರುವ ಪೊಲೀಸರು 400 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ಜಿಲ್ಲಾ ಪೊಲೀಸ್ ಕಚೇರಿ ಹಾಗೂ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಡಿವೈಎಸ್’ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ವೃತ್ತ ನಿರೀಕ್ಷಕ ಬಿ.ಜಿ.ಮಹೇಶ್, ಸುಂಟಿಕೊಪ್ಪ ಪಿಎಸ್ಐ ಶ್ರೀಧರ್ ಹಾಗೂ ಸಿಬ್ಬಂದಿಗಳ ತನಿಖಾ ತಂಡವನ್ನು ರಚಿಸಲಾಗಿತ್ತು.

ಈ ತಂಡವು ಶುಕ್ರವಾರ ಸುಂಟಿಕೊಪ್ಪದ ಬಿ.ಎಂ.ರಸ್ತೆಯಲ್ಲಿರುವ ಹೋಟೇಲ್‌ನಲ್ಲಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುವ ಕುರಿತು ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಈ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

ಅಲ್ಲದೆ ಜಿಲ್ಲೆಯ ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ವರಿಷ್ಠಾಧಿಕಾರಿಯವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!