ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ..

ಹೊಸದಿಗಂತ ವರದಿ ವಿಜಯಪುರ: 

ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಮದ್ಯವನ್ನು ವಶಪಡಿಸಿಕೊಂಡಿರುವ ಘಟನೆ ವಿಜಯಪುರ ತಾಲೂಕಿನ ಅಲಿಯಾಬಾದ್ ಗ್ರಾಮದ ಬಳಿ ನಡೆದಿದೆ. ಕೃಷ್ಣಾ ರಘುನಾಥ ಕರಪೆ ಹಾಗೂ ಬೀರು ರಾಘು ಮಾನವರ ಬಂಧಿತ ಆರೋಪಿಗಳು.

ಈ ಆರೋಪಿಗಳು, ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.80 ಲಕ್ಷ ಮೌಲ್ಯದ ಸುಮಾರು 10 ಪೆಟ್ಟಿಗೆ ಮದ್ಯ ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿಜಯಪುರ ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!