ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದ ಶೋಪಿಯಾನ್ನಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. Üಸಿ¨ಇದೇ ವೇಳೆ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶ ಪಡೆದಿದ್ದಾರೆ.
ಡೂಮ್ವಾನಿ ಕೀಗಾಂನ ಶಾಹಿದ್ ಅಹ್ಮದ್ ಗೇನೆ ಮತ್ತು ಪಿಂಜೂರ್ ಶೋಪಿಯಾನ್ನ ಕಿಫಾಯತ್ ಅಯೂಬ್ ಅಲಿ ಬಂಧಿತ ಉಗ್ರರು.ಈ ಇಬ್ಬರು ಉಗ್ರರು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಇ-ತೊಯ್ಬಾ(ಎಲ್ಇಟಿ) ಸಂಘಟನೆಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು.
ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸಿಆರ್ಪಿಎಫ್ ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆಗೆ ನಡೆಸಿದ್ದಾರೆ.