ಪಾಕ್ ಪರ ಘೋಷಣೆ ಕೂಗಿದವರನ್ನು ಬಂಧಿಸಿ : ಹುಬ್ಬಳ್ಳಿಯಲ್ಲಿ ಎಬಿವಿಪಿ ಆಗ್ರಹ

ಹೊಸದಿಗಂತ ವರದಿ ಹುಬ್ಬಳ್ಳಿ:

ರಾಜ್ಯ ಸಭಾ ಸದಸ್ಯ ಸಯ್ಯದ ಹುಸೇನ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಹಾಗೂ ತಕ್ಷಣ ಅವರ ಮೇಲೆ‌ ಕ್ರಮಕೈಗೊಳ್ಳಲು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬುಧವಾರ ವಿದ್ಯಾನಗರದ ಬಿವಿವಿ ಕಾಲೇಜಿನ ಆವರಣದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರ ಹಾಗೂ ಪಾಕ್ ಪರ ಘೋಷಣೆ ಕೂಗಿದವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸಭಾ ಸದಸ್ಯ ಸಯ್ಯದ ನಾಸೀರ್ ಹುಸೇನ ಅವರು ಪಾಕ್ ಪರ ಘೋಷಣೆ ಕೂಗಿದವರ ತಡೆಯಲು ಪ್ರಯತ್ನ ಮಾಡಲಿಲ್ಲ ಹಾಗೂ ವಿರೋಧ ವ್ಯಕ್ತಪಡಿಸಲಿಲ್ಲ. ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದರೇ ಅವರ ಮೇಲೆ ಸದಸ್ಯರು ದರ್ಪ ತೊರಿರುವುದು ನೋಡಿದರೆ ದೇಶ ದ್ರೋಹಿಗಳಿಗೆ ಬೆಂಬಲ ನೀಡುತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಕೆಲವು ದಿನಗಳ ಹಿಂದೆ ವಿಧಾನಸಭೆ ಚುನಾವಣೆ ಗೆಲುವಿನ ಸಂದರ್ಭದಲ್ಲೂ ಬೆಳಗಾವಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಪಾಕಿಸ್ತಾನದ ಧ್ವಜ ಹಾರಿಸಿದ್ದರು. ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ವಿಷಯ ಅತ್ಯಂತ ಗಂಭೀರವಾಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.ಆದ್ದರಿಂದ ಅವರ ಮೇಲೆ ತಕ್ಷಣ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!