ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಉತ್ತರಪ್ರದೇಶ ಸಚಿವ ರಘುರಾಜ್ ಸಿಂಗ್ ಅವರು ಈ ತಿಂಗಳ ಹದಿನಾರರಂದು ‘ರಾಹುಲ್ ಗಾಂಧಿಯವರು ದೇಶದ ನಂಬರ್ ಒನ್ ಭಯೋತ್ಪಾದಕ’ ಎಂದು ಹೇಳಿದ್ದಾರೆ.ಈ ರೀತಿ ಕೊಲೆ ಬೆದರಿಕೆ ಹಾಕಿದವರನ್ನು ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ರಾಹುಲ್ ಗಾಂಧಿ ಅವರ ವಿರುದ್ಧದ ಈ ಎಲ್ಲ ಹೇಳಿಕೆಗಳು ನೇರವಾದ ಕೊಲೆ ಬೆದರಿಕೆ ಎನ್ನುವುದು ಸ್ಪಷ್ಟವಾಗಿದ್ದರೂ ಇಲ್ಲಿಯವರೆಗೆ ಪೊಲೀಸರು ಇವರಲ್ಲಿ ಯಾರನ್ನೂ ಬಂಧಿಸಿಲ್ಲ. ಕೆಲವು ಪ್ರಕರಣಗಳಲ್ಲಿ ಪೊಲೀಸರು ಕಾಟಾಚಾರಕ್ಕೆ ಪ್ರಕರಣಗಳನ್ನು ದಾಖಲಿಸಿ ಸುಮ್ಮನಾಗಿದ್ದಾರೆ.ಮಹಾರಾಷ್ಟ್ರದಲ್ಲಿ ನಾಲಗೆ ಕತ್ತರಿಸುವ ಬೆದರಿಕೆ ಒಡ್ಡಿದ್ದ ಶಾಸಕ ಸಂಜಯ್ ಗಾಯಕ್ ವಾಡ ಇನ್ನಷ್ಟು ಉತ್ತೇಜಿತನಾಗಿ ತನ್ನ ವಿರುದ್ದ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರನ್ನು ಹೂತು ಹಾಕುತ್ತೇನೆ ಎಂದು ಹೇಳಿಕೆ ನೀಡಿದ್ದಾನೆ. ಈ ಎಲ್ಲ ಬೆಳವಣಿಗೆಗಳನ್ನು ನೋಡಿದರೆ ಕೊಲೆಗಡುಕ ಮನಸ್ಸಿನ ನಾಯಕರ ಜೊತೆ ಮತ್ತು ಮಿತ್ರ ಪಕ್ಷಗಳು ಕೂಡಾ ಷಾಮೀಲಾಗಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.